ಹೊಸನಗರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆಯ ಅಧ್ಯಕ್ಷ ನಾ. ರವಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಲಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಾಧಕರನ್ನು ಸನ್ಮಾನಿಸಲಿದ್ದಾರೆ. ಪತ್ರಿಕಾ ವಿತರಕರನ್ನು ಶಿಮುಲ್ ಅಧ್ಯಕ್ಷ ಎಚ್.ಎನ್. ವಿದ್ಯಾಧರ್ ಗೌರವಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್. ಚಿದಂಬರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಂಘದ ನಿರ್ದೇಶಕ ಎನ್. ರವಿಕುಮಾರ್, ಕೆ.ವಿ. ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಹಾಗೂ ಸತ್ಯನಾರಾಯಣ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀ ವ್ಯಾಸಮಹರ್ಷಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಗುರುಕುಲ, ಬಟ್ಟೆಮಲ್ಲಪ್ಪ ಅವರಿಂದ “ಗಾನ… ನೃತ್ಯ… ವೈಭವ…” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ ಎಂದು ನಾ. ರವಿ ತಿಳಿಸಿದ್ದಾರೆ.
ತಾಲೂಕಿನ ಪತ್ರಕರ್ತರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
















Leave a Reply