ಹೊಸನಗರ: ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹೆಚ್. ಹಾಲಪ್ಪನವರು ಹೊಸನಗರ ತಾಲೂಕಿಗೆ ಕಾರ್ಯನಿಮಿತ್ತ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಗೇರುಪುರ ಸೇತುವೆ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಗಾಯಾಳುವಿನ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಹಾಲಪ್ಪನವರು ತಕ್ಷಣವೇ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿ, ಗಾಯಾಳುವಿಗೆ ತುರ್ತು ಚಿಕಿತ್ಸೆ ಒದಗಿಸುವಂತೆ ಕ್ರಮ ಕೈಗೊಂಡರು. ಆಂಬುಲೆನ್ಸ್ ಆಗಮಿಸಿದ ಬಳಿಕ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ದಾಖಲಿಸಲು ಸಹಕಾರ ನೀಡಿದರು.
ಅಕಸ್ಮಾತ್ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸಿದ ಹಾಲಪ್ಪನವರ ನಡೆ ಸ್ಥಳದಲ್ಲಿದ್ದವರ ಮೆಚ್ಚುಗೆಗೆ ಪಾತ್ರವಾಯಿತು. ಜನಪ್ರತಿನಿಧಿಯೊಬ್ಬರು ಸಮಾಜದ ಹೊಣೆಗಾರಿಕೆಯನ್ನು ಅರಿತು ಸ್ಪಂದಿಸಿದ ಈ ಘಟನೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರ ಆಪ್ತ ಮೆಣಸೆ ಆನಂದ ಮತ್ತು ಇತರರಿದ್ದರು.













Leave a Reply