ಹೊಸನಗರ: 2026-27ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅ. 15ರಂದು ನಡೆದ ಶಿವಮೊಗ್ಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೊಸನಗರ ತಾಲ್ಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ಮಾನ್ಯ ಮತ್ತು ಕುಮಾರಿ ಕೀರ್ತಿ ವಿ.ಆರ್. ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲ್ಲೂಕಿನ ಚಂದಳ್ಳಿ ಗ್ರಾಮದ ಶಾಂತೂರ ಮತ್ತು ತಾರಾ ದಂಪತಿಯ ಪುತ್ರಿ ಮಾನ್ಯ ಹಾಗೂ ವಡಹೊಸಳ್ಳಿ ಗ್ರಾಮದ ರಮೇಶ್ ಮತ್ತು ಸುಮಿತ್ರ ಎಸ್. ದಂಪತಿಯ ಪುತ್ರಿ ಕೀರ್ತಿ ವಿ.ಆರ್. ಅವರು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಯೋಗೇಶ್ ಹೆಚ್. ಹೆಬ್ಬಳಗೆರೆ ಅವರು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
















Leave a Reply