ಹೊಸನಗರದ ಕೋಟೆ ಸರ್ಕಲ್ನಿಂದ ರಾಘವೇಂದ್ರ ಸ್ವಾಮಿ ಬೃಂದಾವನದವರೆಗೆ ಮೆರವಣಿಗೆ
ಹೊಸನಗರ: ಏಪ್ರಿಲ್ 14ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಉಡುಪಿಯ ಪುತ್ತಿಗೆ ಮಠದ ಶ್ರೀಗಳು ಆಗಮಿಸಲಿದ್ದಾರೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ ತಿಳಿಸಿದ್ದಾರೆ.
ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರೊಂದಿಗೆ ಅವರ ಶಿಷ್ಯರಾದ ಸುಶೀಂದ್ರ ತೀರ್ಥ ಸ್ವಾಮೀಜಿಯವರು ಹೊಸನಗರದ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಅದೇ ದಿನ ಬೆಳಿಗ್ಗೆ 10 ಗಂಟೆಗೆ ಹೊಸನಗರದ ಕೋಟೆ ಸರ್ಕಲ್ನಿಂದ ರಾಘವೇಂದ್ರ ಸ್ವಾಮಿ ಬ್ರಂದಾವನದವರೆಗೆ ಮೆರವಣಿಗೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಂತರ ಸಂಜೆ 5 ಗಂಟೆಯವರೆಗೆ ದೇವಾಲಯದಲ್ಲಿ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಆಶೀರ್ವಾದ ಹಾಗೂ ಪ್ರಸಾದವನ್ನು ಪಡೆದುಕೊಳ್ಳುವಂತೆ ದೇವಾಲಯ ಸಮಿತಿ ಮನವಿ ಮಾಡಿದೆ.















Leave a Reply