ಶುಭಕೋರಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ
ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ಮಂಡಲದ ನೂತನ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಶ್ರೀ ಎನ್. ಸತೀಶ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವಲ್ಲಿ ಹಾಗೂ ಹೊಸನಗರ ಮಂಡಲದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವಲ್ಲಿ ಅವರ ಅನುಭವ ಮತ್ತು ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದರು.

ಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸುವುದಾಗಿ ಹಾಗೂ ಅವರ ಮುಂದಿನ ಎಲ್ಲಾ ಜನಪರ ಕಾರ್ಯಗಳು ಮತ್ತು ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖಂಡರು ಭರವಸೆ ನೀಡಿದ್ದಾರೆ.













Leave a Reply