ಹೊಸನಗರ: ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಸರ್ಕಾರ ಇನ್ನಷ್ಟು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಆಗ್ರಹಿಸಿದರು.
ಅವರು ಹೊಸನಗರ ತಾಲ್ಲೂಕಿನ ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸ್ವಸಹಾಯ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಮಹಿಳೆಯರು, ಅವರ ಕುಟುಂಬಗಳು ಹಾಗೂ ಸಮಾಜದ ಅಭಿವೃದ್ಧಿಗಾಗಿ ಸಂಘಟನೆಗಳು ಶ್ರಮಿಸುತ್ತಿವೆ. ಮಹಿಳೆಯರ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ, ಹಿಂಸಾಚಾರ, ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವರ್ಷದಿಂದ ವರ್ಷಕ್ಕೆ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮಹಿಳೆಯರು ಹಾಗೂ ಮಕ್ಕಳು ಭಯಭೀತ ಪರಿಸ್ಥಿತಿಯಲ್ಲಿ ಬದುಕುವಂತಾಗಿದೆ ಎಂದು ಅವರು ವಿಷಾದಿಸಿದರು.ರಾಜ್ಯದಲ್ಲಿಯೂ ಅನೇಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಕೆಲವು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಹಲವಾರು ಪ್ರಕರಣಗಳಲ್ಲಿ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬರುತ್ತಿರುವುದರಿಂದ ಅಪರಾಧಗಳಿಗೆ ತಡೆ ಬೀಳುವುದಿಲ್ಲ ಎಂದು ಅವರು ಹೇಳಿದರು.
ಆದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ಹತ್ಯೆಯಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಜಾಮೀನು ನೀಡದಂತೆ ಕಾನೂನು ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ರಾಜ್ಯದಲ್ಲಿಯೂ ಅನೇಕ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಕೆಲವು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಹಲವಾರು ಪ್ರಕರಣಗಳಲ್ಲಿ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬರುತ್ತಿರುವುದರಿಂದ ಅಪರಾಧಗಳಿಗೆ ತಡೆ ಬೀಳುವುದಿಲ್ಲ ಎಂದು ಅವರು ಹೇಳಿದರು.
ಆದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ಹತ್ಯೆಯಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಜಾಮೀನು ನೀಡದಂತೆ ಕಾನೂನು ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಎಂ. ಗುಡ್ಡೆಕೊಪ್ಪ ಗ್ರಾಮ ಒಕ್ಕೂಟದ ಅಧ್ಯಕ್ಷೆ ಶಶಿಕಲಾ, ಕೊಡೂರು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಕಬಳೆ ನಗರ ಒಕ್ಕೂಟದ ಅಧ್ಯಕ್ಷೆ ಸವಿತಾ, ಸೋನಲೆ ಒಕ್ಕೂಟದ ಅಧ್ಯಕ್ಷೆ ನಾಗಮಣಿ, ರಾಮಚಂದ್ರಪುರ ಒಕ್ಕೂಟದ ಅಧ್ಯಕ್ಷೆ ಸುಮಲತಾ, ಪಟಗುಪ್ಪೆ ಜೆನಿ ಒಕ್ಕೂಟದ ಅಧ್ಯಕ್ಷೆ ವೀಣಾ ಸೇರಿದಂತೆ ನೂರಾರು ಮಹಿಳೆಯರು ಉಪಸ್ಥಿತರಿದ್ದರು.














Leave a Reply