
ರಿಪ್ಪನ್‌ಪೇಟೆ: ಸಮೀಪದ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಸಂಘದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಅವರು, ಕಳೆದ ಅವಧಿಯಲ್ಲಿ ಸಂಘದಲ್ಲಿ ಉಂಟಾದ ನಷ್ಟದ ಕುರಿತು ಸದಸ್ಯರೊಂದಿಗೆ ಸಮಗ್ರ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಸಂಘದ ಪ್ರಗತಿ ಹಾಗೂ ಲಾಭದಾಯಕ ಕಾರ್ಯಚಟುವಟಿಕೆಗಳನ್ನು ವೃದ್ಧಿಸಲು ಎಲ್ಲ ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರೈತರು ಸಂಘದಿಂದ ಪಡೆದಿರುವ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಸಂಘದ ಆರ್ಥಿಕ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಷೇರುದಾರರು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಎಸ್. ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
















Leave a Reply