ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ

Blue and Red Voter Education Banner 20260407 121706 0000 scaled ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ
Spread the love

ರಿಪ್ಪನ್‌ಪೇಟೆ:ಮೀಪದ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತದಜಡ್ಡುವಿನಲ್ಲಿ ವಾಸವಾಗಿದ್ದ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಭಾನುವಾರ ನಡೆದಿದೆ.

d 6 rpt 1p6214586386225093022 ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ
ಸಂಪೂರ್ಣ ಸುಟ್ಟು ಕರಕಲಾದ ಮನೆ

ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುಮಿತ್ರಾ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಘಟನೆಯ ಸಮಯದಲ್ಲಿ ಮನೆಯಲ್ಲಿದ್ದವರು ತಕ್ಷಣ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.

img 20260407 wa00171470693318591947747 ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ
ಶಾಸಕ ಆರಗ ಜ್ಞಾನೇಂದ್ರ ಸ್ಥಳ ಪರಿಶೀಲನೆ

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ನೀರು ಮತ್ತು ಇತರ ಸೌಲಭ್ಯಗಳ ಮೂಲಕ ಬೆಂಕಿ ಆರಿಸಲು ಹರಸಾಹಸ ಪಟ್ಟರು. ಆದರೆ ಅಗ್ನಿಶಾಮಕ ದಳ ಹಾಗೂ ಸಂಬಂಧಿತ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

img 20260406 wa00443420766798950475685 ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ
ನೊಂದ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಹಸ್ತ ಚಾಚಿದ ಶಾಸಕ ಆರಗ ಜ್ಞಾನೇಂದ್ರ

ನಂತರ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಅಗತ್ಯ ಸಹಾಯ ಒದಗಿಸಿ ಸರ್ಕಾರದ ಸೂಕ್ತ ಪರಿಹಾರದ ಭರವಸೆ ನೀಡಿದರು.

img 20260325 wa00282714980250106804435 ಮನೆಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ವಸ್ತುಗಳು ಭಸ್ಮ
ಶಾಸಕ ಆರಗ ಜ್ಞಾನೇಂದ್ರ ಭೇಟಿ, ಕುಟುಂಬಕ್ಕೆ ಸಾಂತ್ವನ

Leave a Reply

Your email address will not be published. Required fields are marked *