ರಿಪ್ಪನ್ ಪೇಟೆ: ಆನಂದಪುರ ಕಡೆಯಿಂದ ಎರಡು ಲಾರಿಗಳಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ಹಾಗೂ ಸಿಬ್ಬಂದಿ ಗುರುವಾರ ಬೆಳಗಿನ ಜಾವ 5.30ರ ಸುಮಾರಿಗೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ರಿಪ್ಪನ್ ಪೇಟೆ ಸಮೀಪದ ವರನಹೊಂಡ ರಸ್ತೆ ಬಳಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಆನಂದಪುರ ಕಡೆಯಿಂದ ಬರುತ್ತಿದ್ದ ಎರಡು ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸಲಾಗುತ್ತಿದ್ದ ಹಿನ್ನೆಲೆಯಲ್ಲಿ ಎರಡು ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ನಂತರ ಲಾರಿಗಳನ್ನು ರಿಪ್ಪನ್ ಪೇಟೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜಂಬಿಟ್ಟಿಗೆ ಸಾಗಣೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಅನುಮತಿ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್, ಗಣೇಶ್, ಶಿವಪ್ಪ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
















Leave a Reply