ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರಕಟಾವು ನಡೆಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ ಹಸು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಹಾರೋಗೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಳ್ಳಿಯಲ್ಲಿ ಕೌಶಿಕ್ ಎಂಬಾತ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಮರವನ್ನು ಕಡಿಸುತ್ತಿದ್ದನು ಎನ್ನಲಾಗಿದೆ. ಇದೇ ವೇಳೆ ಅಲ್ಲಿ ಬಂದಿದ್ದ ಹಸುವಿನ ಮೇಲೆ ಕಡಿದ ಮರ ಬಿದ್ದ ಪರಿಣಾಮ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ.
ಮೃತ ಹಸು ಕುಂದೇಕೊಪ್ಪ ಗ್ರಾಮದ ಮಂಜುನಾಥ್ ಅವರಿಗೆ ಸೇರಿದುದಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಘಟನೆ ಅರಣ್ಯ ಜಾಗದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ.















Leave a Reply