ಜನವರಿ 17 ಶನಿವಾರ ಕಾಂಗ್ರೇಸ್ ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಧರಣಿ: ಹರತಾಳು ಹಾಲಪ್ಪ

NAADI NEWS 20260114 190120 0000 ಜನವರಿ 17 ಶನಿವಾರ ಕಾಂಗ್ರೇಸ್ ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಧರಣಿ: ಹರತಾಳು ಹಾಲಪ್ಪ
Spread the love

ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ ಸಂದರ್ಭದಲ್ಲಿ ಮಾಧವ ಶೆಟ್ಟಿಗೆ ಬಿಜೆಪಿಯ ಕಾರ್ಯಕರ್ತರು ಹೊಡೆದಿದ್ದಾರೆ ಕೊಲೆ ಮಾಡಲು ಸಂಚು ನಡೆಸಿದ್ದಾರೆ ಎಂದು ಮೂರು ಜನ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಅಟ್ಟಿದ್ದು ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಕೆಲವು ಭ್ರಷ್ಠ ಸರ್ಕಾರಿ ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದು ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ ಇವುಗಳನ್ನ ಒಳಗೊಂಡ ಹೊಸನಗರ ತಾಲ್ಲೂಕಿನ ಎಲ್ಲ ಸಮಸ್ಯೆಗಳನ್ನು ಇಟ್ಟುಕೊಂಡು ಜನವರಿ 17ಕ್ಕೆ ಶನಿವಾರ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಹರತಾಳು ಹಾಲಪ್ಪನವರು ಹೇಳಿದರು.
ಹೊಸನಗರದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

img 20260110 wa00008056520116493816884 ಜನವರಿ 17 ಶನಿವಾರ ಕಾಂಗ್ರೇಸ್ ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಧರಣಿ: ಹರತಾಳು ಹಾಲಪ್ಪ


  ನಾವು ಮತ್ತು ನಮ್ಮ ಕಾರ್ಯಕರ್ತರು ಎರಡುವರೆ ವರ್ಷದಿಂದ ತಾಳಿಕೊಂಡು ಬರುತ್ತಿದ್ದೇವೆ ಹೊಸನಗರ – ಸಾಗರ ಕ್ಷೇತ್ರದ ಶಾಸಕರು ಅಧಿಕಾರಿಗಳನ್ನು ಮುಂದೆ ಬಿಟ್ಟು ತಮ್ಮ ಕಾರ್ಯಕರ್ತರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಡಿಸೆಂಬರ್ 31ರ ರಾತ್ರಿ ಮಾಜಿ ಶಾಸಕರಾದ ಬಿ.ಸ್ವಾಮಿರಾವ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ತಂದೆಯ ಜೊತೆಯಲ್ಲಿ ಸುರೇಶ್ ಸ್ವಾಮಿರಾವ್ ಮತ್ತು ಸ್ನೇಹಿತರು ಇದ್ದು ಅಲ್ಲಿಗೆ ಕಾಂಗ್ರೇಸ್ ಮುಖಂಡ ಶಾಸಕರ ಭಂಟ ಮಾಧವ ಶೆಟ್ಟಿಗೆ ಎರಡುವರೆ ಗಂಟೆಗೆ ಸತ್ಯಾಗ್ರಹ ನಡೆಸುವ ಸ್ಥಳಕ್ಕೆ ಬರುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದರು.
   ಹೊಸನಗರದ ಹೊಸನಗರ-ಸಾಗರ ಕ್ಷೇತ್ರದ ಶಾಸಕರು ಪೋಲೀಸ್ ಇಲಾಖೆ, ಕಂದಾಯ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ದೂರುಪಯೋಗ ಪಡಿಸಿಕೊಂಡು ತಮ್ಮ ಕೆಲಸ ಸಾಧಿಸಿಕೊಳ್ಳುತ್ತಿದ್ದಾರೆ ಅಧಿಕಾರಿಗಳು ಅಧಿಕಾರ ದೂರುಪಯೋಗ ಪಡಿಸಿಕೊಂಡು ಶಾಸಕರ ಮಾತಿಗೆ ತಲೆ ಅಲ್ಲಡಿಸುತ್ತಿದ್ದಾರೆ ಅಧಿಕಾರಿಗಳು ಕಾನೂನು ಅಡಿಯಲ್ಲಿ ಕೆಲಸ ಮಾಡಲೀ ಇಲ್ಲವಾದರೆ ಬಿಜೆಪಿಯ ಪ್ರತಿಭಟನೆಗೆ ಗಾಳಿಪಟವಾಗಿ ಹಾರಿ ಹೋಗುತ್ತಿರಿ ಎಂದು ಅಧಿಕಾರಿಗಲಿಗೆ ಈ ಮೂಲಕ ಎಚ್ಚರಿಸಿದರು. 


   ಹೊಸನಗರದ ಹೊಸನಗರ-ಸಾಗರ ಕ್ಷೇತ್ರದ ಶಾಸಕರು ಪೋಲೀಸ್ ಇಲಾಖೆ, ಕಂದಾಯ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ದೂರುಪಯೋಗ ಪಡಿಸಿಕೊಂಡು ತಮ್ಮ ಕೆಲಸ ಸಾಧಿಸಿಕೊಳ್ಳುತ್ತಿದ್ದಾರೆ ಅಧಿಕಾರಿಗಳು ಅಧಿಕಾರ ದೂರುಪಯೋಗ ಪಡಿಸಿಕೊಂಡು ಶಾಸಕರ ಮಾತಿಗೆ ತಲೆ ಅಲ್ಲಡಿಸುತ್ತಿದ್ದಾರೆ ಅಧಿಕಾರಿಗಳು ಕಾನೂನು ಅಡಿಯಲ್ಲಿ ಕೆಲಸ ಮಾಡಲೀ ಇಲ್ಲವಾದರೆ ಬಿಜೆಪಿಯ ಪ್ರತಿಭಟನೆಗೆ ಗಾಳಿಪಟವಾಗಿ ಹಾರಿ ಹೋಗುತ್ತಿರಿ ಎಂದು ಅಧಿಕಾರಿಗಲಿಗೆ ಈ ಮೂಲಕ ಎಚ್ಚರಿಸಿದರು. 


   ಆನವರಿ ೧೭ನೇ ಶನಿವಾರ ನಡೆಯುವ ಬಿಜೆಪಿ ಪ್ರತಿಭಟನೆಯಲ್ಲಿ ಲೋಕಸಬಾ ಸದಸ್ಯರಾದ ಬಿ.ವೈ ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕ ಚನ್ನಬಸಪ್ಪ,  ಜಿಲ್ಲಾಧ್ಯಕ್ಷ ಜಗದೀಶ್, ಟಿ.ಡಿ ಮೇಘರಾಜ್, ಶಿವರಾಜ್, ಎಂಎನ್ ಸುಧಾಕರ್ ಉಮೆಶ್ ಕಂಚುಗಾರ್, ಆರ್.ಟಿ ಗೋಪಾಲ್ ಹಾಗೂ ಹೊಸನಗರದ ಕ್ಷೇತ್ರದ ಎಲ್ಲ ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.


ಪತ್ರಿಕಾ ಘೋಷ್ಠಿಯಲ್ಲಿ ಬಿಜೆಪಿ ತಾಲ್ಲೂಕು ಪ್ರಭಾರಿ ಪದ್ಮಿನಿ, ಎನ್.ಆರ್ ದೇವಾನಂದ್, ಗಣಪತಿ ಬಿಳಗೋಡು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವರ್ತೆಶ್, ಕೆ.ವಿ. ಕೃಷ್ಣಮೂರ್ತಿ, ಉಮೆಶ್ ಕಂಚುಗಾರ್, ಎಂ.ಎನ್ ಸುದಾಕರ್, ಯುವರಾಜ್, ಹಾಲಗದ್ದೆ ಉಮೇಶ್ ಆರ್.ಟಿ ಗೋಪಾಲ್, ಶ್ರೀಪತಿರಾವ್, ಮಂಜುನಾಥ ಸಂಜೀವ, ಸತ್ಯನಾರಾಯಣ, ವಿಜಯಕುಮಾರ್ ಮಂಡಾಣಿ ಮೋಹನ್ ಮುಂತಾದವರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *