ರಿಪ್ಪನ್ ಪೇಟೆ: ಇಲ್ಲಿನ ಕಸ್ತೂರಿ ಕನ್ನಡ ಸಂಘದ 9ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಎಂ. ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕಳೆದ ಸಾಲಿನ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಜಿ.ಆರ್. ಗೋಪಾಲಕೃಷ್ಣ, ಉಪಾಧ್ಯಕ್ಷರಾಗಿ ಹಬೀಬ್, ನೇಮಪ್ಪ ಬಂಡಿ, ದೀಪಾನಾಗರಾಜ್, ಸಾಜಿದಾ, ಆರ್.ಡಿ. ಶೀಲಾ ಹಾಗೂ ಈಶ್ವರಪ್ಪಗೌಡ ಕುಕ್ಕಳಲೆ ಆಯ್ಕೆಯಾಗಿದ್ದಾರೆ.
ಸಂಘಟನಾ ಕಾರ್ಯದರ್ಶಿಗಳಾಗಿ ಹೇಮಾ ಮಂಜಪ್ಪ, ಅಬ್ದುಲ್ ಬ್ಯಾರಿ, ನಿರ್ಮಲಾ ಹಾಗೂ ಪ್ರವೀಣ್ ಆಚಾರ್ ಆಯ್ಕೆಯಾಗಿದ್ದಾರೆ. ಸುದೇಶ್ ಆರ್.ಡಿ. ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ಪಿಯೂಸ್ ರೋಡ್ರಿಗಸ್ ಅವರನ್ನು ಖಜಾಂಚಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ದೇವರಾಜ್ ಕೆರೆಹಳ್ಳಿ ಆಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್















Leave a Reply