
ಕೋಣಂದೂರು : 2026ನೇ ಸಾಲಿನ ಕೆಸಿಇಟಿ (KCET) ಪರೀಕ್ಷಾ ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ರಾಷ್ಟ್ರೀಯ (IND) ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿ ಹೇಮಂತ್ ಎಸ್. ಅವರು ಪಶುವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ 4072ನೇ ರ್‍ಯಾಂಕ್, ಕೃಷಿ ಬಿ.ಎಸ್ಸಿ ವಿಭಾಗದಲ್ಲಿ 4874ನೇ ರ್‍ಯಾಂಕ್ ಹಾಗೂ ಎಂಜಿನಿಯರಿಂಗ್ ವಿಭಾಗದಲ್ಲಿ 9803ನೇ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಇದೇ ವೇಳೆ ವಿದ್ಯಾರ್ಥಿನಿ ವಿಧಾತ್ರಿ ಕೆ.ವಿ. ಅವರು ಎಂಜಿನಿಯರಿಂಗ್ ವಿಭಾಗದಲ್ಲಿ 10774ನೇ ರ್‍ಯಾಂಕ್ ಗಳಿಸಿ ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ನ್ಯಾಷನಲ್ ಎಜುಕೇಶನ್ ಸೊಸೈಟಿ (ರಿ), ಶಿವಮೊಗ್ಗದ ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ವಾಸುದೇವ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಮಕ್ಕಳ ಸಾಧನೆಯಿಂದ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.















Leave a Reply