ರಿಪ್ಪನ್ ಪೇಟೆ: ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ಗೋ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಗುರುವಾರ ( ಏ. 2 ) ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ KA 15 7997 ಟಾಟಾ 205 ವಾಹನದಲ್ಲಿ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಕಾಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿರುವುದಾಗಿ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಪಿಎಸ್‌ಐ ರಾಜು ರೆಡ್ಡಿ ಹಾಗೂ ಅವರ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ , ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್ನಲಾಗಿದೆ.
ಆರೋಪಿಯನ್ನು ಜಿಯಾವುಲ್ಲಾ (45) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಬಹುಕಾಲದಿಂದ ಅಕ್ರಮ ಗೋಕಳ್ಳ ಸಾಗಾಟ ದಂಧೆ ನಡೆಸುತ್ತಿರುವ ಗಂಭೀರ ಆರೋಪಗಳಿವೆ ಎಂದು ಎನ್ನಲಾಗಿದೆ.
ಸ್ಥಳೀಯರ ಪ್ರಕಾರ, ಈತ ಅನೇಕ ವರ್ಷಗಳಿಂದ ಈ ಕೃತ್ಯವನ್ನು ತನ್ನ ವೃತ್ತಿಯನ್ನಾಗಿ ಮಾಡಿಕೊಂಡಿದ್ದು, ಗ್ರಾಮದಲ್ಲಿ ಗೋವುಗಳನ್ನು ಕಸಾಯಿಖಾನೆಗೆ ರವಾನಿಸುವ ಪ್ರಮುಖ ವ್ಯಕ್ತಿಯಾಗಿ ಹೆಸರು ಮಾಡಿರುವ ಆರೋಪಗಳು ಕೇಳಿ ಬಂದಿವೆ.
ಇದು ಪ್ರಾಣಿಗಳ ಮೇಲಿನ ಕ್ರೂರತೆಯ ಸ್ಪಷ್ಟ ಉದಾಹರಣೆಯಾಗಿದ್ದು,ಕಾನೂನನ್ನು ಲೆಕ್ಕಿಸದೆ ನಿರಂತರವಾಗಿ ಈ ದಂಧೆಯಲ್ಲಿ ತೊಡಗಿರುವ ಆರೋಪಿಯ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಣಿ ಹಿಂಸೆ ಕಾಯ್ದೆ ಮತ್ತು ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ತನಿಖೆ ಮುಂದುವರಿದಿದೆ.















Leave a Reply