ರಿಪ್ಪನ್ಪೇಟೆ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಹಾಗೂ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆಸುವಿನಮನೆ ರತ್ನಾಕರ್ (58) ಅವರು ಅನಾರೋಗ್ಯದಿಂದ ಬುಧವಾರ ಸಂಜೆ ನಿಧನರಾದರು.
ಹೊಸನಗರ ತಾಲ್ಲೂಕಿನ ಕೆಸುವಿನಮನೆ ಗ್ರಾಮದವರಾದ ರತ್ನಾಕರ್ ಅವರು ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2020ರಿಂದ ರಿಪ್ಪನ್ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
2024ರಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ರತ್ನಾಕರ್ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡ ನಂತರ ಪುನಃ ಶಾಲಾ ಕರ್ತವ್ಯಕ್ಕೆ ಮರಳಿದ್ದರು. ಕಳೆದ ಕೆಲ ತಿಂಗಳಿನಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ನಿಧನದಿಂದ ಶಿಕ್ಷಣ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಒಬ್ಬ ಸಕ್ರಿಯ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ.















Leave a Reply