ಕೋಡೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಮನೆ ಭಸ್ಮ|ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ;ಕಾರ್ಯಕ್ರಮಕ್ಕೆ ತೆರಳಿದ್ದ ಕುಟುಂಬಕ್ಕೆ ಆಘಾತ

ಹೊಸನಗರ ತಾಲೂಕಿನ ಕೋಡೂರು ಕೀಳಂಬಿ ಸರ್ಕಲ್ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ. ಬಟ್ಟೆ, ಗೃಹೋಪಯೋಗಿ ವಸ್ತುಗಳು, ದಾಖಲೆಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.