ಕೋಣಂದೂರು ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಪ್ರದರ್ಶನ

Add a heading 20260710 132107 0000 ಕೋಣಂದೂರು ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಪ್ರದರ್ಶನ
Spread the love

ಕೋಣಂದೂರು: ಸಿಐಎಸ್‌ಸಿಇ (CISCE) ಝೋನಲ್ ಕರಾಟೆ ಚಾಂಪಿಯನ್‌ಶಿಪ್–2026ರಲ್ಲಿ ಕೋಣಂದೂರಿನ ಎನ್‌ಆರ್‌ಎಸ್ ರೆಸಿಡೆನ್ಶಿಯಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

image editor output image 160243377 17836699704556950648279252969705 ಕೋಣಂದೂರು ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಪ್ರದರ್ಶನ

ಹಟ್ಟಿಯಂಗಡಿಯ ಸಿದ್ದಿವಿನಾಯಕ ರೆಸಿಡೆನ್ಶಿಯಲ್ ಸ್ಕೂಲ್‌ನಲ್ಲಿ ನಡೆದ ಈ ಚಾಂಪಿಯನ್‌ಶಿಪ್‌ನಲ್ಲಿ ಎನ್‌ಆರ್‌ಎಸ್ ಶಾಲೆಯ 22 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 16 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ, 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಪ್ರಾಂತೀಯ (Regional) ಹಂತದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಕುಮಿಟೆ (Kumite) ವಿಭಾಗದಲ್ಲಿ ಸಮರ್ಥ ಹೆಚ್.ಎಸ್., ಶ್ರೀಶಾ ಆರ್., ತೇಜಸ್ ಕೆ., ಯುಕೇಶ್ ಸೇನ್ , ಸಾಧ್ವಿ ಎಸ್. ಜೋಯ್ಸ್,ಸಮರ್ಥ್ ಹೆಚ್ ಎಸ್,ಲಿತೀಶ್ ವಿ., ಸುಶಾಂತ್ ರಾವ್ ಎಸ್. ಸೇರಿದಂತೆ ಹಲವು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಾಂತೀಯ ಹಂತಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ನ್ಯಾಷನಲ್ ಎಜುಕೇಶನ್ ಸೊಸೈಟಿ (ರಿ.), ಶಿವಮೊಗ್ಗದ ಅಧ್ಯಕ್ಷ ಜಿ ಎಸ್ ನಾರಾಯಣ ರಾವ್,ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಶಾಲೆಯ ಪ್ರಾಂಶುಪಾಲ ಕೆ.ಎಸ್. ವಾಸುದೇವ, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

img 01227689607081187543123 ಕೋಣಂದೂರು ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಪ್ರದರ್ಶನ
ಜಾಹೀರಾತು

Leave a Reply

Your email address will not be published. Required fields are marked *