ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

NAADI NEWS 20260314 214005 0000 ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
Spread the love

ನೂತನ ತಾಲೂಕು ಅಧ್ಯಕ್ಷರಾಗಿ ರವಿ ನಾಗರಕೊಡಿಗೆ ಮತ್ತು  ಪ್ರಧಾನ ಕಾರ್ಯದರ್ಶಿ ಅಶ್ವಿನಿ ಪಂಡಿತ್ ಅಧಿಕಾರ ಸ್ವೀಕಾರ

ಹೊಸನಗರ:ಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೊಸನಗರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಹೊಸ ಪದಾಧಿಕಾರಿಗಳಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾದ ರವಿ ನಾಗರಕೊಡಿಗೆ ಮತ್ತು ಪ್ರಧಾನ ಕಾರ್ಯದರ್ಶಿ ಅಶ್ವಿನಿ ಪಂಡಿತ್ ಅವರಿಗೆ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ವೈದ್ಯನಾಥ್ ಅವರು ಸಂಘದ ರೆಸಲ್ಯೂಷನ್ ಪುಸ್ತಕವನ್ನು ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ನಂತರ ಮಾತನಾಡಿದ ಜಿಲ್ಲಾಧ್ಯಕ್ಷರಾದ ವೈದ್ಯನಾಥ್, ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು. ಸಂಘದ ಸದಸ್ಯರಿಗೆ ಸರ್ಕಾರದಿಂದ ಸಿಗಬೇಕಾದ ವಿವಿಧ ಸೌಲಭ್ಯಗಳು, ಕಲ್ಯಾಣ ಯೋಜನೆಗಳು ಮತ್ತು ಹಕ್ಕುಗಳ ಬಗ್ಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿ ಅವುಗಳನ್ನು ತಲುಪಿಸುವಲ್ಲಿ ಸಂಘ ಬದ್ಧವಾಗಿದೆ ಎಂದು ಹೇಳಿದರು.

ಪತ್ರಕರ್ತರು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಸತ್ಯಾಸತ್ಯತೆಯನ್ನು ಜನರಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಪತ್ರಕರ್ತರ ಹಿತಾಸಕ್ತಿಗಳನ್ನು ಕಾಪಾಡುವುದು ಸಂಘದ ಪ್ರಮುಖ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಘಟಕದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷರಾದ  ನಾಗರಕೊಡಿಗೆ ರವಿ , ಪತ್ರಕರ್ತರು ತಮ್ಮ ಮೇಲಿರುವ ಜವಾಬ್ದಾರಿಯನ್ನು ಅರಿತು ನಿಷ್ಠೆಯಿಂದ ಕೆಲಸ ಮಾಡಬೇಕು, ಸಮಾಜದ ವಿವಿಧ ಸಮಸ್ಯೆಗಳು, ಸರ್ಕಾರದ ಯೋಜನೆಗಳು ಹಾಗೂ ಕಾರ್ಯಾಂಗ ಮತ್ತು ಶಾಸಕಾಂಗಗಳ ಕಾರ್ಯವೈಖರಿಯನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಇದಲ್ಲದೆ ತಾಲೂಕು ಘಟಕವು ಜಿಲ್ಲಾ ಸಂಘದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಘದ ಪ್ರತಿಯೊಬ್ಬ ಸದಸ್ಯರ ಹಿತಾಸಕ್ತಿಗಳನ್ನು ಕಾಪಾಡುವ ಕೆಲಸವನ್ನು  ಮಾಡಲಿದ್ದೇನೆ ಎಂದು ಅವರು ಭರವಸೆ ನೀಡಿದರು. ಪತ್ರಕರ್ತರ ಏಕತೆ ಮತ್ತು ಸಂಘಟಿತ ಕಾರ್ಯದಿಂದಲೇ ಸಂಘ ಮತ್ತಷ್ಟು ಬಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್ ಹಾಗೂ ತಾಲೂಕು ಉಸ್ತುವಾರಿಗಳಾದ ಸತ್ಯನಾರಾಯಣ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನಿ ಪಂಡಿತ್, ಉಪಾಧ್ಯಕ್ಷರಾದ ಪರುಶುರಾಮ, ಖಜಾಂಚಿ ಶಾಂತರಾಮ್, ಕಾರ್ಯದರ್ಶಿ ಮನು ಎಸ್, ಸದಸ್ಯರಾದ ನಾಗೇಶ್ ಎಸ್ ನಾಯಕ್, ಬಸವರಾಜ್, ಚಿದಾನಂದ ಸ್ವಾಮಿ, ಶಶಿಕುಮಾರ್, ಸುಧೀಂದ್ರ ಹೆಬ್ಬಾರ್ ಸೇರಿದಂತೆ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಹೋರಾಟಕ್ಕೆ ಬೆಂಬಲ


ಈ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗಾಗಿ ನಡೆಯಲಿರುವ ಹೋರಾಟಕ್ಕೆ ತಾಲೂಕು ಪತ್ರಕರ್ತರ ಸಂಘ ಸಂಪೂರ್ಣ ಸಹಕಾರ ನೀಡಲು ನಿರ್ಧರಿಸಿತು. ಹೋರಾಟದ ದಿನಾಂಕವನ್ನು ಏಪ್ರಿಲ್ 5 ಮತ್ತು 6ರಂದು ನಿಗದಿಪಡಿಸಿರುವುದಾಗಿ ತಿಳಿಸಲಾಗಿದ್ದು, ಈ ಹೋರಾಟ ಯಶಸ್ವಿಯಾಗಲು ಸಂಘದ ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.
ಇದರ ಜೊತೆಗೆ ಈ ಹೋರಾಟಕ್ಕೆ ಶಿವಮೊಗ್ಗ ಜಿಲ್ಲಾ ಘಟಕದ ಸಹಕಾರವೂ ಅಗತ್ಯವೆಂದು ಮನವಿ ಮಾಡಲಾಗಿದ್ದು, KUWJ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರು ತಮ್ಮ ಸಹಮತ ವ್ಯಕ್ತಪಡಿಸಿ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಕಾರ್ಯಕ್ರಮವು ಸ್ನೇಹಪೂರ್ಣ ವಾತಾವರಣದಲ್ಲಿ ನಡೆದಿದ್ದು, ಹೊಸ ಪದಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಘಟಕವು ಅತ್ಯುತ್ತಮ ಕಾರ್ಯಗಳನ್ನು ಮಾಡಲಿ ಎಂಬ ಆಶಯವನ್ನು ಎಲ್ಲರೂ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *