ಹೊಸನಗರ: ತಾಲ್ಲೂಕಿನ ಮಾಸ್ತಿಕಟ್ಟೆ ಸಮೀಪದ ಹುಲಿಕಲ್ ಘಾಟಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಒಂದು ಧರೆಗೆ ಗುದ್ದಿ ಮಗು ಒಂದರ ದುರ್ಮರಣಕ್ಕೆ ಕಾರಣವಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಮಂಗಳೂರು ಕಡೆಗೆ ಖಾಸಗಿ ಬಸ್ ವಾಹನದ ಮೇಲಿನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಅವರನ್ನು ತಕ್ಷಣ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಅಪಘಾತದ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
















Leave a Reply