ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಸ್ಲಾಮಿಕ್ ಉಗ್ರ ತೀರ್ಥಹಳ್ಳಿಯ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟ

Blue and Red Voter Education Banner 20260427 203341 0000 scaled ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಸ್ಲಾಮಿಕ್ ಉಗ್ರ ತೀರ್ಥಹಳ್ಳಿಯ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟ
Spread the love

NIA ವಿಶೇಷ ನ್ಯಾಯಾಲಯ ತೀರ್ಪು

ಶಿವಮೊಗ್ಗ : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ, ತೀರ್ಥಹಳ್ಳಿ ಮೂಲದ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

img 20260110 wa00001014765224450765368 ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಸ್ಲಾಮಿಕ್ ಉಗ್ರ ತೀರ್ಥಹಳ್ಳಿಯ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟ


2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ.2022ರಲ್ಲಿ ಕರಾವಳಿ ನಗರಿ ಮಂಗಳೂರನ್ನು ಬೆಚ್ಚಿಬೀಳಿಸಿದ್ದ  ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ. ಈ ಭೀಕರ ಸಂಚಿನ ಇಸ್ಲಾಮಿಕ್ ಭಯೋತ್ಪಾದನೆಯ ಸಂಚನ್ನು ತನಿಖೆ ಬಹಿರಂಗಗೊಳಿಸಿತು  ಮತ್ತು ತನಿಖೆಯ ಏನೆಲ್ಲ ಆಗಿತ್ತು ಎಂಬ ಮಾಹಿತಿ ಇಲ್ಲಿದೆ ನೋಡಿ.

img 20260427 wa00135748725744815280620 ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಸ್ಲಾಮಿಕ್ ಉಗ್ರ ತೀರ್ಥಹಳ್ಳಿಯ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟ

ಮಂಗಳೂರಿನ ಕಂಕನಾಡಿ ರೈಲ್ವೆ ನಿಲ್ದಾಣದ ಸಮೀಪವಿರುವ ನಾಗುರಿ ಎಂಬಲ್ಲಿ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಭಾರಿ ಸದ್ದು ಕೇಳಿಬಂತು. ಅದು ಸಾಮಾನ್ಯ ಸ್ಫೋಟವಾಗಿರಲಿಲ್ಲ; ಅದೊಂದು ವ್ಯವಸ್ಥಿತವಾಗಿ ರೂಪಿಸಲಾಗಿದ್ದ ಐಇಡಿ (IED) ಬಾಂಬ್ ಸ್ಫೋಟ. ಈ ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಸುತ್ತಿದ್ದ ಮಹಮ್ಮದ್ ಶಾರಿಕ್ ಮತ್ತು ಅಮಾಯಕ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದರು.

ಪೊಲೀಸರು ತನಿಖೆ ಆರಂಭಿಸಿದಾಗ ಆಟೋದಲ್ಲಿ ಸುಟ್ಟುಹೋಗಿದ್ದ ಪ್ರೆಶರ್ ಕುಕ್ಕರ್ ಪತ್ತೆಯಾಯಿತು. ಅದರೊಳಗೆ ಡಿಟೋನೇಟರ್, ಸರ್ಕ್ಯೂಟ್ ಮತ್ತು ಬ್ಯಾಟರಿಗಳನ್ನು ಅಳವಡಿಸಲಾಗಿತ್ತು. ಆತ್ಮಾಹುತಿ ಬಾಂಬ್ ಇದ್ದಾಗಿತ್ತು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು. ಶಾರಿಕ್ ತನ್ನ ಬಳಿ ಹುಬ್ಬಳ್ಳಿಯ ‘ಪ್ರೇಮರಾಜ್’ ಎಂಬುವವರ ಹೆಸರಿನ ನಕಲಿ ಆಧಾ‌ರ್ ಕಾರ್ಡ್ ಇಟ್ಟುಕೊಂಡಿದ್ದನು, ಶಾರಿಕ್ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ಅಲ್ಲಿಯೇ ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಅಳವಡಿಸಿದ್ದನು ಎಂಬುದು ತನಿಖೆಯಲ್ಲಿ ತಿಳಿದು ಬಂದಿತ್ತು.

img 20260423 wa00568008883195734774535 ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಇಸ್ಲಾಮಿಕ್ ಉಗ್ರ ತೀರ್ಥಹಳ್ಳಿಯ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟ

Leave a Reply

Your email address will not be published. Required fields are marked *