ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ  ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ

IMG 20260519 WA0022 ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ  ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ
Spread the love
img 20260110 wa0000831461576815997423 ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ  ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ
img 20260324 wa0056332772491349384743 ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ  ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 6ರ ವ್ಯಾಪ್ತಿಯ ಗಾಡಿಕೊಪ್ಪದ ಪೊಲೀಸ್ ಲೇಔಟ್‌ನಲ್ಲಿ ಮಹಾನಗರ ಪಾಲಿಕೆಯಿಂದ ಕೈಗೆತ್ತಿಕೊಳ್ಳಲಾಗಿರುವ ಯುಜಿಡಿ ವೆಟ್‌ವೆಲ್ ಕಾಮಗಾರಿ ಸ್ಥಳಕ್ಕೆ ಮಾನ್ಯ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸದರಿ ಪೊಲೀಸ್ ಲೇಔಟ್‌ನಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಯುಜಿಡಿ ಕಾಮಗಾರಿಗೆ ತಾಂತ್ರಿಕ ಹಾಗೂ ಸ್ಥಳೀಯ ಕಾರಣಗಳಿಂದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ  ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

img 20260427 wa00137710579947884330703 ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ  ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಿ ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ

ಸಾರ್ವಜನಿಕರು ಮತ್ತು ಪಾಲಿಕೆಯ ಇಂಜಿನಿಯರ್‌ಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, “ನಗರದ ಹಾಗೂ ವಾರ್ಡ್‌ನ ಸರ್ವಾಂಗೀಣ ಅಭಿವೃದ್ಧಿ ನಮಗೆ ಮುಖ್ಯ. ಆದರೆ, ಯಾವುದೇ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಬಾರದು. ಸ್ಥಳೀಯ ನಾಗರಿಕರ ಆತಂಕಗಳನ್ನು ದೂರ ಮಾಡಿ, ಅವರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆಯಿಂದ ಸ್ಥಳ ಪರಿಶೀಲಿಸಿ ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಬೇಕು” ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಶಾಸಕರ ಮಧ್ಯಸ್ಥಿಕೆಯಿಂದಾಗಿ ಸ್ಥಳೀಯರ ಗೊಂದಲಗಳು ಬಗೆಹರಿದಿದ್ದು, ಕಾಮಗಾರಿ ನಡೆಸಲು ಸಾರ್ವಜನಿಕರು ಸಮ್ಮತಿ ಸೂಚಿಸಿದರು.

ಈ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ವಾರ್ಡ್‌ನ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *