ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗುಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೂಗುಡ್ತಿ ನಿವಾಸಿ ಇಬ್ರಾಹಿಂ (69) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ. ಇವರು ರಿಪ್ಪನ್ ಪೇಟೆಯಿಂದ ಮೂಗೂಡ್ತಿಗೆ ಬಸ್‌ನಲ್ಲಿ ಪ್ರಯಾಣಿಸಿ, ಬಸ್ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ಇಬ್ರಾಹಿಂ ಅವರು ಬಸ್‌ನಿಂದ ಇಳಿದು ರಸ್ತೆ ದಾಟಲು ಮುಂದಾಗುತ್ತಿದ್ದಾಗ, ಸಾಗುತಿದ್ದ ಡಸ್ಟರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
















Leave a Reply