ಅಂಡರ್ 19 ಏಷ್ಯಾಕಪ್: ಶ್ರೀಲಂಕಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ!

FB IMG 1766154611829 ಅಂಡರ್ 19 ಏಷ್ಯಾಕಪ್: ಶ್ರೀಲಂಕಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ!
Spread the love

ಅಂಡರ್-19 ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ದ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ.

ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಭಾರತ 18 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಸವಾಲನ್ನು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದರೆ, ಇತ್ತ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಇಂದೇ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ.


Spread the love

Leave a Reply

Your email address will not be published. Required fields are marked *