ರಿಪ್ಪನ್ ಪೇಟೆ : ಸಮೀಪದ ಸರ್ಕಾರಿ ಪ್ರೌಢಶಾಲೆ ಬೆಳ್ಳೂರಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಸೋಮಶೇಖರ ಬಂಡಿ ಅವರು ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ವಿಜ್ಞಾನವು ನಮ್ಮ ದೈನಂದಿನ ಜೀವನದಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
ವಿಜ್ಞಾನ ಶಿಕ್ಷಕರಾದ ವಿಜಯಕುಮಾರ್ ರವರು ಭಾರತೀಯ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರ ಸಂಶೋಧನೆಯಾದ “ರಾಮನ್ ಪರಿಣಾಮ” (Raman Effect) ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ತಿಳಿಸಿ, ಕೆಲವು ಪ್ರಯೋಗಗಳ ಮೂಲಕ ಅದರ ವೈಜ್ಞಾನಿಕ ತತ್ವಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಗಗಳನ್ನು ಕಣ್ತುಂಬಿಕೊಂಡರು. ವಿಜ್ಞಾನ ದಿನಾಚರಣೆ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮೂಡಿಸಿದಂತಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.














Leave a Reply