
ಶಿವಮೊಗ್ಗ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಹಾಗೂ ಜೂನ್ ತಿಂಗಳ ಆಹಾರ ಧಾನ್ಯಗಳನ್ನು ಮೇ ತಿಂಗಳಲ್ಲೇ ವಿತರಣೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‌ಗೆ 35 ಕೆ.ಜಿ.ಯಂತೆ ಎರಡು ತಿಂಗಳ ಒಟ್ಟು 70 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ. ಅದೇ ರೀತಿ ಆದ್ಯತಾ ಕೇಂದ್ರ ಹಾಗೂ ರಾಜ್ಯ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ತಲಾ 5 ಕೆ.ಜಿ.ಯಂತೆ ಎರಡು ತಿಂಗಳ ಒಟ್ಟು 10 ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಪಡಿತರ ವಿತರಣೆಯನ್ನು ಮೇ 31ರೊಳಗೆ ಮಾತ್ರ ಪಡೆಯಬಹುದಾಗಿದ್ದು, ಫಲಾನುಭವಿಗಳು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಧಾನ್ಯವನ್ನು ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳು ಅಥವಾ ಸಮಸ್ಯೆಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967ಕ್ಕೆ ಕರೆ ಮಾಡಬಹುದು ಅಥವಾ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.














Leave a Reply