ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಮುಸ್ಲಿಂ ಯುವಕರು !?

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಶನಿವಾರ ಸಂಜೆ ಗೋವೊಂದರ ಕುತ್ತಿಗೆ ಸೀಳಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಬಾಲಕನ ಸಮಯಪ್ರಜ್ಞೆಯಿಂದ ಪ್ರಕರಣ ಬಯಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಗೋವು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.