
ಶಿವಮೊಗ್ಗ, ಜೂನ್ 16: ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2024-25ನೇ ಸಾಲಿಗೆ ಮರುಹಂಚಿಕೆಯಾಗಿರುವ ಅನುದಾನದಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಯೋಜನೆಯಡಿ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಕೃಷಿ ಕೊಳ ನಿರ್ಮಿಸಿ ಮೀನುಗಾರಿಕೆ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ ಹಾಗೂ ಮೀನುಮರಿ ಪಾಲನಾ ಘಟಕಗಳ ನಿರ್ಮಾಣಕ್ಕೆ ನೆರವು ನೀಡಲಾಗುವುದು.
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60ರಷ್ಟು ಸಹಾಯಧನ ಲಭ್ಯವಿರುತ್ತದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿತ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಜೂನ್ 20ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















Leave a Reply