ಗ್ರಾಮಸ್ಥರಿಂದ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಧರಣಿ

image editor output image727225913 1768829307999 ಗ್ರಾಮಸ್ಥರಿಂದ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಧರಣಿ
Spread the love

ನಗರ: ತಾಲೂಕಿನ ನಗರ ಹೋಬಳಿಯ ಹಾಳು ಬಿದ್ದಿರುವ ಹಳೆಯ ಬಸ್ ನಿಲ್ದಾಣವನ್ನು ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಆಗ್ರಹಿಸಿ, ಬಿಜೆಪಿ ನಗರ ಹೋಬಳಿಯ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿ ಗಮನ ಸೆಳೆದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ ಸ್ಥಳೀಯ ಗ್ರಾಮ ಪಂಚಾಯತ್‌ನ ಕೆಲ ಸದಸ್ಯರು ವೈಯಕ್ತಿಕ ಹಿತಾಸಕ್ತಿಯಿಂದ ಅನಧಿಕೃತವಾಗಿ ಎನ್‌ಒಸಿ ನೀಡದೆ ಯೋಜನೆಯನ್ನು ವಿಳಂಬಗೊಳಿಸಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಭಟನಾಕಾರರು, ಪ್ರಸ್ತುತ ಇರುವ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಯೋಗ್ಯವಾಗಿಲ್ಲ ಎಂದು ಹೇಳಿದ್ದಾರೆ. ಅದು ಕುಸಿದು ಬಿದ್ದರೆ ಜನಸಾಮಾನ್ಯರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ತಕ್ಷಣವೇ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ನಗರ ನಿತಿನ್, ರಾಜೇಶ್ ಹಿರಿಮನೆ, ರಮಾಕಾಂತ್ ಮತ್ತಿಮನೆ, ಶ್ರೀಕಾಂತ್, ಜಗದೀಶ್ ಹೆಂಡೆಗದ್ದೆ, ಕೆ.ಬಿ. ಕುಮಾ, ಕೃಷ್ಣಮೂರ್ತಿ, ಉಮೇಶ್, ಸಂತೋಷ ಚಿಕ್ಕಪೇಟೆ, ರಮೇಶ್, ದೇವರಾಜ್, ವಿನಾಯಕ ಚಕ್ಕಾರು ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.


Spread the love

Leave a Reply

Your email address will not be published. Required fields are marked *