ರಿಪ್ಪನ್ ಪೇಟೆ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ರಾಮಕೃಷ್ಣ ವಿದ್ಯಾಲಯವು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 10ನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಿಕ್ಷಣ ಕ್ಷೇತ್ರದಲ್ಲಿ ತನ್ನ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿರುವುದು ವಿಶೇಷ.
ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 31 ವಿದ್ಯಾರ್ಥಿಗಳೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 25 ಮಂದಿ ವಿದ್ಯಾರ್ಥಿಗಳು ಶೇಕಡಾ 85 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಉಳಿದ ವಿದ್ಯಾರ್ಥಿಗಳೂ ಶೇಕಡಾ 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವೈಯಕ್ತಿಕ ಸಾಧನೆಯಲ್ಲಿ ಐಶ್ವರ್ಯ ಟಿ.ಎಂ. 625ರಲ್ಲಿ 606 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಅವನಿ ಜಿ.ಡಿ. 603 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದು, ಸಂರಕ್ಷ ಸಿ.ಆರ್. 601 ಅಂಕಗಳನ್ನು ಪಡೆದು ತೃತೀಯ ಸ್ಥಾನ ಗಳಿಸಿದ್ದಾರೆ.

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದ ಪರಿಶ್ರಮ ಹೆಚ್ಚಿದ್ದು ಆಡಳಿತ ಮಂಡಳಿಯ ಸಹಕಾರವು ಅಪಾರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಪೋಷಕರ ಸಹಕಾರವೂ ಈ ಸಾಧನೆಗೆ ಬೆನ್ನೆಲುಬಾಗಿದೆ.
ಈ ಸಾಧನೆ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲು ಶುಭಾಶಯ ಕೋರಿದರು.

















Leave a Reply