ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ ದಾಳಿ
ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದ ಸಮೀಪ ಇರುವ ಕಲ್ಲುಹಳ್ಳ ಎಂಬ ಚಿಕ್ಕ ಹಳ್ಳಿಯಲ್ಲಿ ಕಿರಾಣಿ ಅಂಗಡಿಯಲ್ಲೂ ಮದ್ಯ ಮಾರಾಟವನ್ನು ಮಾಡಲಾಗುತಿತ್ತು. ಮಧ್ಯ ಮಾರಾಟವಲ್ಲದೆ ಅಕ್ರಮವಾಗಿ ಸಾರ್ವಜನಿಕ ಪ್ರದೇಶದಲ್ಲಿಯೇ ಮಧ್ಯ ಸೇವನೆಗೆ ಅನಧಿಕೃತವಾಗಿ ವ್ಯವಸ್ಥೆಯನ್ನು ಕಿರಾಣಿ ಅಂಗಡಿ ಮಾಲೀಕರು ಕಲ್ಪಿಸಿದ್ದರು.

ಖಚಿತ ಮಾಹಿತಿ ಪಡೆದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ ಅಂಗಡಿಯ ಮೇಲೆ ದಾಳಿ ನಡೆಸಿದಾಗ ಸಾರ್ವಜನಿಕ ಪ್ರದೇಶದಲ್ಲಿಯೇ 600.ರೂ ಮೌಲ್ಯದ ಒಟ್ಟು 12 ಮದ್ಯದ ಚಿಕ್ಕ ಪೌಚ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಮಧ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಆರೋಪದಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಪೊಲೀಸರ ದಾಳಿಯಲ್ಲಿ ಕಲ್ಲುಹಳ್ಳ ಗ್ರಾಮದ ಜನರಲ್ ಸ್ಟೋರ್ ನ ಮಾಲೀಕ ಪರಮೇಶ್ವರ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಪ್ರಕರಣದ ಕುರಿತಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಕಾನೂನು ಬಾಹಿರವಾಗಿ ಅಕ್ರಮ ಮದ್ಯ ಮಾರಾಟ ಮತ್ತು ಸಾರ್ವಜನಿಕ ಪ್ರದೇಶದಲ್ಲಿ ಮದ್ಯ ಮಾರಾಟ ಮಾಡುವುದು ಕಾಯ್ದೆ ಅಬಕಾರಿ ಕಾಯ್ದೆ ಉಲ್ಲಂಘನೆಯಾದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತ ಮಧ್ಯ ಮಾರಾಟ ಹೆಚ್ಚಾಗಿದ್ದು ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಿಪ್ಪನ್ ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ಉತ್ತಮ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ, ಅವಿನಾಶ್ ಹಾಜರಿದ್ದರು.
#shivamogga














Leave a Reply