ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ – ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

Blue and Red Voter Education Banner 20260503 210905 0000 scaled ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ
Spread the love
img 20260110 wa0000621005953325158450 ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ರಿಪ್ಪನ್ ಪೇಟೆ :ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಾಂಸ್ಕೃತಿಕ, ಕ್ರೀಡಾ, ರೋವರ್-ರೇಂಜರ್ಸ್ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು.

img 20260428 wa00461270963560044392813 ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಕಾರ್ಯಕ್ರಮವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುಗದಲ್ಲಿ ಉನ್ನತ ವಿದ್ಯಾಭ್ಯಾಸ ಪಡೆದ ಯುವಕರಿಗೆ ದೇಶ-ವಿದೇಶಗಳಲ್ಲಿ ಅಪಾರ ಉದ್ಯೋಗಾವಕಾಶಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಗುರಿ ಹೊಂದಿದ ವ್ಯಾಸಂಗದ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪೋಷಕರು ಹಾಗೂ ಗುರುಗಳ ನಿರೀಕ್ಷೆಯನ್ನು ಈಡೇರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.

ಇಂದಿನ ಕಾಲದಲ್ಲಿ ಸರ್ಕಾರ ಹಾಗೂ ಪೋಷಕರು ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಭವಿಷ್ಯದ ಗುರಿಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನಕ್ಕೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು. ಉತ್ತಮ ವಿದ್ಯಾಭ್ಯಾಸದಿಂದ ಉತ್ತಮ ಉದ್ಯೋಗ ಪಡೆದು ಸಮಾಜದಲ್ಲಿ ಗೌರವ ಗಳಿಸಬಹುದು ಎಂದು ಹೇಳಿದರು.

img 20260423 wa00564085935279515428626 ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಯುವಜನರಿಗೆ ಸಹಾಯವಾಗಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬಾಲ್ಯದಿಂದಲೇ ಶಿಸ್ತು, ಪರಿಶ್ರಮ ಹಾಗೂ ಹಿರಿಯರ ಗೌರವವು ವ್ಯಕ್ತಿತ್ವ ವಿಕಸನಕ್ಕೆ ಅಗತ್ಯ ಎಂದು ಅವರು ತಿಳಿಸಿದರು.
ಕಾಲೇಜಿನ ಎಲ್ಲಾ ಚಟುವಟಿಕೆಗಳನ್ನು ಇನ್ನಷ್ಟು ಉತ್ತೇಜಿಸಲು ಹೈಟೆಕ್ ಆಡಿಟೋರಿಯಂ ನಿರ್ಮಿಸುವ ಭರವಸೆಯನ್ನೂ ಅವರು ನೀಡಿದರು.

img 20260427 wa00134490085986649640293 ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ


ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಣೂರು ಟಾಕಪ್ಪ ಮಾತನಾಡಿ, ನಮ್ಮ ಸಂಸ್ಕೃತಿ ಮತ್ತು ಜನಪದ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು.

20260502 1526542069575057233267438 ರಿಪ್ಪನ್‌ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಅವಕಾಶಗಳ ಕರೆ - ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಈ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಬಿ.ಎಲ್. ರಾಜು ವಹಿಸಿದ್ದರು. ಈ ಸಂದರ್ಭದಲ್ಲಿ  ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ್ ಆಚಾರ್, ಮಂಜುನಾಥ ಕಾಮತ್, ಫ್ಯಾನ್ಸಿ ರಮೇಶ್, ಪಿಯೂಸ್ , ಕೆರೆಹಳ್ಳಿ ರವೀಂದ್ರ,ರಘು ಸೇರಿದಂತೆ ಗಣ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *