
ರಿಪ್ಪನ್ ಪೇಟೆ : ಪರಿಸರವನ್ನು ರಕ್ಷಿಸಿದರೆ ಮಾತ್ರ ಮುಂದಿನ ಪೀಳಿಗೆ ಉತ್ತಮ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ. ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಿ ಅದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕು ಎಂದು ತಹಶೀಲ್ದಾರ್ ಭರತರಾಜ್ ಹೇಳಿದರು.
ವಿಶ್ವ ಪರಿಸರ ದಿನದ ಅಂಗವಾಗಿ ರಿಪ್ಪನ್ ಪೇಟೆಯ ನಾಡಕಚೇರಿಯಲ್ಲಿ ತಹಶೀಲ್ದಾರ್ ಭರತರಾಜ್ ಅವರ ನೇತೃತ್ವದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪ್ರಕೃತಿಯನ್ನು ಉಳಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಗೌತಮ್, ಗಿರೀಶ್ ಜಂಬಳ್ಳಿ, ಪಿ. ರಮೇಶ್, ರವೀಂದ್ರ ಕೆರೆಹಳ್ಳಿ, ಪ್ರವೀಣ್ ಎಸ್., ಸೈಯದ್ ಅಫ್ರೋಜ್, ಜಾಕೀರ್, ಶೋಭಾ, ರಕ್ಷಿತಾ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.


















Leave a Reply