ಹಿಂದಿ ಹೇರಿಕೆ ವಿರೋಧಿಸಿ,ಬ್ಯಾಂಕ್‌ನಲ್ಲಿ ಕನ್ನಡ ಭಾಷೆಯಲ್ಲೆ ವ್ಯವಹಾರಕ್ಕೆ ಆಗ್ರಹಿಸಿ ಜು.20 ಪ್ರತಿಭಟನೆ

Add a heading 20260719 210101 0000 1 ಹಿಂದಿ ಹೇರಿಕೆ ವಿರೋಧಿಸಿ,ಬ್ಯಾಂಕ್‌ನಲ್ಲಿ ಕನ್ನಡ ಭಾಷೆಯಲ್ಲೆ ವ್ಯವಹಾರಕ್ಕೆ ಆಗ್ರಹಿಸಿ ಜು.20 ಪ್ರತಿಭಟನೆ
Spread the love

ರಿಪ್ಪನ್‌ಪೇಟೆ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹಿಂದಿ ಹೇರಿಕೆ ಖಂಡಿಸಿ, ಸಾರ್ವಜನಿಕರಿಗೆ ಕನ್ನಡದಲ್ಲೇ ಸೇವೆ ದೊರೆಯಬೇಕು ಹಾಗೂ ಸಿಬ್ಬಂದಿ ರಾಜ್ಯ ಭಾಷೆಯಲ್ಲೇ ವ್ಯವಹರಿಸಬೇಕು ಎಂದು ಆಗ್ರಹಿಸಿ ಮಲೆನಾಡು ಕನ್ನಡ ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಜು. 20 ಸೋಮವಾರ ಬೆಳಿಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ಕೆನರಾ ಬ್ಯಾಂಕ್ ಶಾಖೆಯ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬ್ಯಾಂಕ್‌ಗಳಲ್ಲಿ ಅನ್ಯಭಾಷಿಕ ಸಿಬ್ಬಂದಿ ಹೆಚ್ಚಿರುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ತಮ್ಮ ಮಾತೃಭಾಷೆಯಾದ ಕನ್ನಡದಲ್ಲಿ ವ್ಯವಹರಿಸಲು ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಯನ್ನು ವಿರೋಧಿಸಿ, ಬ್ಯಾಂಕ್‌ಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.
ಶಾಖಾಧಿಕಾರಿ ಸೇರಿದಂತೆ ಎಲ್ಲಾ ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವಂತೆ ಕ್ರಮ ಕೈಗೊಳ್ಳಬೇಕು ಅಥವಾ ಕನ್ನಡ ಬಲ್ಲ ಸಿಬ್ಬಂದಿಯನ್ನೇ ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ಕುರಿತು ಮಲೆನಾಡು ಕನ್ನಡ ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಸಾರ್ವಜನಿಕರು ಹಾಗೂ ಕನ್ನಡಾಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿವೆ.

Leave a Reply

Your email address will not be published. Required fields are marked *