
ರಿಪ್ಪನ್ ಪೇಟೆ : ಈದ್ ಮಿಲಾದ್ ಹಾಗೂ ಗಣೇಶ ಹಬ್ಬ ಇನ್ನೆರಡು ತಿಂಗಳಲ್ಲಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಿಪ್ಪನ್ಪೇಟೆ ಪಟ್ಟಣದಲ್ಲಿ ಮಂಗಳವಾರ ಸಂಜೆ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ವತಿಯಿಂದ ಪಿಎಸ್ಐ ರಾಜು ರೆಡ್ಡಿ ನೇತೃತ್ವದಲ್ಲಿ ವಿಶೇಷ ಪಥಸಂಚಲನ ನಡೆಸಲಾಯಿತು.
ಪಟ್ಟಣದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ನಡೆದ ಪಥಸಂಚಲನದ ಮೂಲಕ ಶಾಂತಿ ಭಂಗಕ್ಕೆ ಯತ್ನಿಸುವ ದುಷ್ಟಶಕ್ತಿಗಳಿಗೆ ಕೋಮುವಾದಿಗಳಿಗೆ ಪೊಲೀಸರು ಎಚ್ಚರಿಕೆಯ ಸಂದೇಶ ರವಾನಿಸಿದರು. ಹಬ್ಬಗಳ ಸಂದರ್ಭದಲ್ಲಿ ಯಾವುದೇ ರೀತಿಯ ಕೋಮು ಸೌಹಾರ್ದಕ್ಕೆ ಧಕ್ಕೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಮತ್ತು ಸೌಹಾರ್ದ ಕಾಪಾಡುವಲ್ಲಿ ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಪಥಸಂಚಲನದಲ್ಲಿ ಎಸ್ಎಎಫ್ ಇನ್ಸ್ಪೆಕ್ಟರ್ ಕಿರಣ್, ಎಎಸ್ಐಗಳಾದ ಹಾಲಪ್ಪ, ವಿನೋದ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
















Leave a Reply