ರಾಜ್ಯದ ಗಮನ ಸೆಳೆದ ಗ್ರಾಮೀಣ ಭಾಗದ ಅಮೃತ ಕಾಲೇಜು
ರಿಪ್ಪನ್‌ಪೇಟೆ: ಪಿಯುಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟವಾಗಿದ್ದು, ಇಲ್ಲಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 98.07ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಂದ ಒಟ್ಟು 156 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 154 ಮಂದಿ ಉತ್ತೀರ್ಣರಾಗುವ ಮೂಲಕ ಕಾಲೇಜು ಗಮನಾರ್ಹ ಸಾಧನೆ ಮಾಡಿದೆ.
ಫಲಿತಾಂಶದ ವಿವರ ಪ್ರಕಾರ, 60 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 77 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 14 ಮಂದಿ ದ್ವಿತೀಯ ದರ್ಜೆಯಲ್ಲಿ ಹಾಗೂ 3 ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಮೇರು ಸಾಧನೆ ಮಾಡಿದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಇಂಚರ (581 ಅಂಕ), ಪ್ರಜ್ಜಿತ್ ಹೆಚ್.ಪಿ. (577 ಅಂಕ) ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹರ್ಷ (577 ಅಂಕ) ಮತ್ತು ಕಲಾ ವಿಭಾಗದಲ್ಲಿ ರಮ್ಯ (578 ಅಂಕ) ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರ ಕಾರಣವಾಗಿದ್ದು, ಎಲ್ಲರಿಗೂ ಪ್ರಾಚಾರ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಕಾಲೇಜಿನ ಮತ್ತು ವಿದ್ಯಾರ್ಥಿಗಳ ಈ ಸಾಧನೆಗೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದಿಸಿದ್ದಾರೆ.














Leave a Reply