
ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಅದೇ ಗ್ರಾಮದ ದಂಪತಿ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಾಹಿತಿ ಪ್ರಕಾರ, ಕೂಲಿ ಕೆಲಸ ಮಾಡುತ್ತಿದ್ದ ವಿವಾಹಿತ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಕ್ಕ ಪಕ್ಕದ ಊರುಗಳ ಏಳು ಯುವಕರು ಆಮಿಷವೊಡ್ಡಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾದ 7 ಯುವಕರ ವಿಚಾರಣೆ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ರಿಪ್ಪನ್‌ಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
















ExoWatts
Great content! Keep up the good work!