SBI ಬ್ಯಾಂಕ್ ಸಮೀಪ ಹೆಜ್ಜೇನು ದಾಳಿ: ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಗಾಯ

NAADI NEWS 20260317 151100 0000 SBI ಬ್ಯಾಂಕ್ ಸಮೀಪ ಹೆಜ್ಜೇನು ದಾಳಿ: ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಗಾಯ
Spread the love

ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ರಿಪ್ಪನ್ ಪೇಟೆ: ಟ್ಟಣದ ಸಾಗರ ರಸ್ತೆಯಲ್ಲಿರುವ SBI ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಯಲ್ಲಿ ಏಕಾಏಕಿ ಹೆಜ್ಜೇನುಗಳ ದಾಳಿ ನಡೆದ ಘಟನೆ ಆತಂಕಕ್ಕೆ ಕಾರಣವಾಯಿತು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೂ ಚುಚ್ಚಿದ ಘಟನೆ ನಡೆದಿದೆ.ಇನ್ನೂ ಕೆಲವು ಕಾಲೇಜು ವಿದ್ಯಾರ್ಥಿಗಳ ಮೇಲೂ ದಾಳಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಸರ್ಕಾರಿ ಬಾಲಕರ ಪಾಠಶಾಲೆಯ ಒಬ್ಬ ವಿದ್ಯಾರ್ಥಿ, ಎಸ್ ಎಸ್ ಎಲ್ ಸಿ ಹಾಲ್ ಟಿಕೆಟ್ ತರಲು ಹೋಗುತ್ತಿದ್ದ  ಇಬ್ಬರು ವಿದ್ಯಾರ್ಥಿ, ಓರ್ವ ಪದವಿ ವಿದ್ಯಾರ್ಥಿಗಳ  ಮೇಲೆ ಹೆಜ್ಜೇನು ದಾಳಿ ಮಾಡಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ SBI ಬ್ಯಾಂಕ್ ಉದ್ಯೋಗಿ ತೌಸಿಫ್ ಅವರಿಗೆ ಸುಮಾರು 30ಕ್ಕೂ ಹೆಚ್ಚು ಹೆಜ್ಜೇನುಗಳು ಚುಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು ತಕ್ಷಣ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಪದವಿ ಕಾಲೇಜಿನ ಉಪನ್ಯಾಸಕರು, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು,ತಕ್ಷಣ ಆಸ್ಪತ್ರೆಗೆ ಧಾವಿಸಿ ವಿದ್ಯಾರ್ಥಿಗಳ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *