ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಕದ್ದ ಆರೋಪಿಗಳು ಅರೆಸ್ಟ್!

Screenshot 20260609 193653 Canva ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಕದ್ದ ಆರೋಪಿಗಳು ಅರೆಸ್ಟ್!
Spread the love
img 20260110 wa00006959872643549645596 ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಕದ್ದ ಆರೋಪಿಗಳು ಅರೆಸ್ಟ್!

ಶಿವಮೊಗ್ಗ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭದ್ರಾವತಿ ಪಟ್ಟಣದ ಭೋವಿ ಕಾಲೊನಿ ನಿವಾಸಿ ವೆಂಕಟೇಶ್ ಅಲಿಯಾಸ್ ಭಟ್ಟರ ವೆಂಕಟೇಶ್ (35) ಹಾಗೂ ಹನುಮಂತ ನಗರದ ಸಿ. ಮಂಜುಳಾ (42) ಎಂದು ಗುರುತಿಸಲಾಗಿದೆ. ಆರೋಪಿತರಿಂದ ಅಂದಾಜು ₹6.20 ಲಕ್ಷ ಮೌಲ್ಯದ 62 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆನಂದಪುರ 20260608 153202 00004261775015099738799 ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಕದ್ದ ಆರೋಪಿಗಳು ಅರೆಸ್ಟ್!

ಏಪ್ರಿಲ್ 8ರಂದು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ತರಳಬಾಳು ಬಡಾವಣೆಯ ಮಹಿಳೆಯೊಬ್ಬರು ಶಿರಾಳಕೊಪ್ಪದಿಂದ ಹಿರೇಕೆರೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಮಾರ್ಗ ಮಧ್ಯೆ ಸುಣ್ಣದಕೊಪ್ಪ ಬಸ್ ನಿಲ್ದಾಣದ ಬಳಿ ತಮ್ಮ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.

ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಶಿಕಾರಿಪುರ ಸಿಪಿಐ ಸಂತೋಷ್ ಎಂ. ಪಾಟೀಲ್ ಮಾರ್ಗದರ್ಶನದಲ್ಲಿ, ಪಿಎಸ್‌ಐ ಪ್ರಶಾಂತ ಕುಮಾರ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

img 20260604 wa0039803348362563536102 ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಕದ್ದ ಆರೋಪಿಗಳು ಅರೆಸ್ಟ್!

Leave a Reply

Your email address will not be published. Required fields are marked *