SHIVAMOGGA : ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ

ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 SHIVAMOGGA : ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ
Spread the love

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು ವತಿಯಿಂದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, /ಎಂ.ಕಾಂ,ಎಂ.ಎಸ್.ಡಬ್ಲೂ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಬಿ.ಪಿ.ಎಲ್. ಪಡಿತರಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್ ಮೆನ್ ವಿದ್ಯಾರ್ಥಿಗಳಿಗೆ, ಬ್ಯಾಡ್ಜ್ ಹೊಂದಿರುವ ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಿಯಾಯಿತಿ ನೀಡಲಾಗುತ್ತದೆ. ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಿದಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಪ್ರವೇಶಾತಿಗೆ ಮಾರ್ಚ್ 31 ಕಡೆಯ ದಿನಾಂಕ. ಮಾಹಿತಿಗಾಗಿ ಸ್ವಾಮಿ ಬಿ.ಎಮ್, ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಆಲ್ಕೊಳ ಸರ್ಕಲ್, ಎಲ್‌ಐಸಿ ಕಚೇರಿ ಹತ್ತಿರ, ಸಾಗರ ಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 9900667916,9739803295, 9480765905 ಸಂಪರ್ಕಿಸಬಹುದು.


img 20260224 wa00691993877445240900039 SHIVAMOGGA : ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ

Spread the love

Leave a Reply

Your email address will not be published. Required fields are marked *