ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Blue and Red Voter Education Banner 20260511 182922 0000 scaled ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು
Spread the love

ಶಿವಮೊಗ್ಗ : ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ನಡೆದಿದೆ.

10018942745764258507345934940 ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಮೃತರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ ನಿವಾಸಿ ಶಿವಕುಮಾರ್ (32) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಸುಮಾರು 9:30ರ ವೇಳೆಗೆ ಶಿವಕುಮಾರ್ ಅವರು ಶಿವಮೊಗ್ಗದಿಂದ ತಮ್ಮ ಸ್ವಗ್ರಾಮ ಹಳೇ ಜೋಗಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಕೊಮ್ಮನಾಳು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಶಿವಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

img 20260427 wa00135398051467691731943 ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

img 20260509 wa00048974631607815517070 ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Leave a Reply

Your email address will not be published. Required fields are marked *