ಶಿವಮೊಗ್ಗ.ಆ. 27|ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮವು 2026–27ನೇ ಸಾಲಿನಲ್ಲಿ ಕ್ರೈಸ್ತ ಸಮುದಾಯದ ಆರ್ಥಿಕ, ಶೈಕ್ಷಣಿಕ ಹಾಗೂ ಸ್ವಯಂ ಉದ್ಯೋಗ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ನಿಗಮದ ಪ್ರಕಟಣೆ ಪ್ರಕಾರ, CET, NEET, PGCET, CLAT ಸೇರಿದಂತೆ ಉನ್ನತ ಶಿಕ್ಷಣ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಶಿಕ್ಷಣ ಸಾಲ ನೀಡಲಾಗುತ್ತದೆ. ವಿದೇಶದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಗರಿಷ್ಠ ₹20 ಲಕ್ಷದವರೆಗೆ ಸಾಲ ಸೌಲಭ್ಯವೂ ಲಭ್ಯವಿದೆ.
ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ಸಾಲದ ಮೇಲೆ ಶೇ.50 ಅಥವಾ ಗರಿಷ್ಠ ₹2 ಲಕ್ಷ ಸಹಾಯಧನ ನೀಡಲಾಗುತ್ತಿದ್ದು, ಫುಡ್ ಟ್ರಕ್, ಮೊಬೈಲ್ ಕಿಚನ್ ಹಾಗೂ ಇತರೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೂ ಸಾಲ ಸೌಲಭ್ಯ ಕಲ್ಪಿಸಲಾಗಿದೆ.
ಅರ್ಹತೆ:
* ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
* ಕ್ರೈಸ್ತ ಸಮುದಾಯಕ್ಕೆ ಸೇರಿದವರಾಗಿರಬೇಕು.
* ಕುಟುಂಬದ ವಾರ್ಷಿಕ ಆದಾಯ ₹6 ಲಕ್ಷ ಮೀರಬಾರದು.
* ವಯಸ್ಸು 18 ರಿಂದ 55 ವರ್ಷಗಳೊಳಗಿರಬೇಕು.
ಆಸಕ್ತರು www.kccdonline.karnataka.gov.in ಮೂಲಕ ಸೆಪ್ಟೆಂಬರ್ 30, 2026 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಜಿಲ್ಲಾ ಕಚೇರಿ ಅಥವಾ 08182-228262 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

















Leave a Reply