ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Screenshot 20260612 211726 Canva ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
Spread the love
img 20260110 wa0000735467686612220471 ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಶಿವಮೊಗ್ಗ:ಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ನಡೆದಿದೆ.

ಮೃತನನ್ನು ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿ ನರಸಿಂಹ (39) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪೂರ್ವನಿಯೋಜಿತವಾಗಿ ನರಸಿಂಹನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿಯ ಪ್ರಕಾರ, ಮನೆಯೊಂದರ ಓಣಿಯೊಳಗೆ ಸಿಲುಕಿಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಸಂಪೂರ್ಣ ವಿರೂಪಗೊಂಡ ಕಾರಣ ಆರಂಭದಲ್ಲಿ ಗುರುತು ಪತ್ತೆಹಚ್ಚುವುದೇ ಕಷ್ಟಕರವಾಗಿತ್ತು ಎನ್ನಲಾಗಿದೆ.

ತಲೆ, ಕುತ್ತಿಗೆ ಹಾಗೂ ಕೈ ಭಾಗಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಮಾರಣಾಂತಿಕ ದಾಳಿಯಿಂದ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.

img 20260604 wa00395738200843432764014 ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Leave a Reply

Your email address will not be published. Required fields are marked *