ನಗರದಲ್ಲಿ ವ್ಯಾಪಕ ಜನಾಕ್ರೋಶ!
ಶಿವಮೊಗ್ಗ: ಅಪ್ರಾಪ್ತರು ಎಸ್ಸೆಸ್ಸೆಲ್ಸಿ ಓದುತ್ತಿದ್ದ ಬಾಲಕನನ್ನು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಊರಗಡೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಊರಗಡೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸಂಕೇತ್ (16) ಎಂಬ ಬಾಲಕನ ಪರೀಕ್ಷೆ ಹಿನ್ನೆಲೆಯಲ್ಲಿ ವಿಶೇಷ ತರಗತಿಯಲ್ಲಿ ಹಾಜರಾಗಿದ್ದ ಎನ್ನಲಾಗುತ್ತಿದೆ.
ಸ್ಪೆಷಲ್ ಕ್ಲಾಸ್ ಮುಗಿಸಿ ಹೋಗುವ ವೇಳೆ ವಿದ್ಯಾರ್ಥಿಗಳ ನಡುವಿನ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದು ತತ್ ಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸುಮಾರು 3-4 ಮುಸ್ಲಿಂ ಬಾಲಕರಿಂದಲೇ ಕೃತ್ಯ ನಡೆದಿದೆ ಎಂಬ ದೂರು ಕೇಳಿ ಬಂದಿದ್ದು ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹ ಸರ್ಕಾರಿ ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗದ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
















Leave a Reply