ತೀರ್ಥಹಳ್ಳಿಯ 28 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ, ₹ 1,30 ಲಕ್ಷ ದಂಡ, ನೊಂದವರಿಗೆ 4 ಲಕ್ಷ ಪರಿಹಾರ  ಏನಿದು ಕೇಸ್?

ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 px 20260219 021739 0000 1 ತೀರ್ಥಹಳ್ಳಿಯ 28 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ, ₹ 1,30 ಲಕ್ಷ ದಂಡ, ನೊಂದವರಿಗೆ 4 ಲಕ್ಷ ಪರಿಹಾರ  ಏನಿದು ಕೇಸ್?
Spread the love

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಿಂದ ಆದೇಶ

ಶಿವಮೊಗ್ಗ : ಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯವು ತೀರ್ಥಹಳ್ಳಿ ತಾಲೂಕಿನ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1,30,000/- ದಂಡವನ್ನು ವಿಧಿಸಿದೆ.

17 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸೆಗಿದ್ದ ತೀರ್ಥಳ್ಳಿ ತಾಲೂಕಿನ 28 ವರ್ಷದ ಯುವಕ, ಘಟನೆ ಕುರಿತು ಬಾಲಕಿಯ ತಾಯಿ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಪೋಕ್ಸೋ  ಕಾಯ್ದೆ  (pocso act) ಅಡಿ ಪ್ರಕರಣವು ದಾಖಲಾಗಿತ್ತು.


ಆರೋಪ ಸಾಬೀತು, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಈ ಪ್ರಕರಣದ ತನಿಖೆ ನಡೆಸಿದ ತೀರ್ಥಹಳ್ಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ  ಅಶ್ವಥ್ ಗೌಡ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಕುರಿತಂತೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರು ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1,30,000 ದಂಡ ವಿಧಿಸಿ ಆದೇಶಿಸಿದ್ದಾರೆ.

ಅಪ್ರಾಪ್ತ ಮುಗ್ಧ ಬಾಲಕಿಗೆ ಸರ್ಕಾರದ ವತಿಯಿಂದ 4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದರು ಎಂದು ಪ್ರಕಟಣೆಯಲ್ಲಿ ಮಾಹಿತಿ ತಿಳಿಸಲಾಗಿದೆ.


Spread the love

Leave a Reply

Your email address will not be published. Required fields are marked *