ಸಂಸದ ಬಿ ವೈ ರಾಘವೇಂದ್ರ ಚಲಿಸುತ್ತಿದ್ದ ವಾಹನ ಅಪಘಾತ

NAADI NEWS 20260121 184925 0000 ಸಂಸದ ಬಿ ವೈ ರಾಘವೇಂದ್ರ ಚಲಿಸುತ್ತಿದ್ದ ವಾಹನ ಅಪಘಾತ
Spread the love

ಹಿಂಬದಿಯಿಂದ ಕಾರು ಡಿಕ್ಕಿ

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು (car) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
  ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.


Spread the love

Leave a Reply

Your email address will not be published. Required fields are marked *