SHIVAMOGGA :ಗರ್ಭಿಣಿ ನೀರಾನೆ ದಾಳಿ -ಯುವ ಪಶುವೈದ್ಯೆಯ ದುರಂತ ಅಂತ್ಯ

Blue and Red Voter Education Banner 20260320 143831 0000 scaled SHIVAMOGGA :ಗರ್ಭಿಣಿ ನೀರಾನೆ ದಾಳಿ -ಯುವ ಪಶುವೈದ್ಯೆಯ ದುರಂತ ಅಂತ್ಯ
Spread the love

ಶಿವಮೊಗ್ಗ: ಗರದ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಅವರು ನೀರಾನೆಯ ದಾಳಿಯಿಂದ ಮೃತಪಟ್ಟ ದುರ್ಘಟನೆ ನಡೆದಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ ಅವರು ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದು, ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು 10:30ರ ವೇಳೆಗೆ ಸನ್ ಕಾನರ್ ಹಕ್ಕಿಗೆ ಚಿಕಿತ್ಸೆ ನೀಡಲು ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು.
ನಂತರ ರಾತ್ರಿ 11:45ರ ಸುಮಾರಿಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದೊಳಗೆ ಪ್ರವೇಶಿಸಿದ ವೇಳೆ, ನೀರಾನೆ ಏಕಾಏಕಿ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು ಬಳಿಕ ಶಸ್ತ್ರಚಿಕಿತ್ಸೆ ಗೂ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಘಟನೆಯ ಹಿನ್ನಲೆ, ಸಂಭವಿಸಿದ ಕಾರಣಗಳು ಹಾಗೂ ಭದ್ರತಾ ಕ್ರಮಗಳಲ್ಲಿ ಯಾವುದೇ ಲೋಪಗಳಿದ್ದವೆಯೇ ಎಂಬುದನ್ನು ಪರಿಶೀಲಿಸಲು ಹಿರಿಯ ಪಶುವೈದ್ಯರು ಮತ್ತು ಅರಣ್ಯಾಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ. ಈ ತಂಡವು ಏಳು ದಿನಗಳೊಳಗೆ ಸಮಗ್ರ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಲಾಗಿದೆ.

ಇದೇ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ವೇಳೆ ಅನುಸರಿಸಬೇಕಾದ ಪ್ರಮಾಣಿತ ಕಾರ್ಯವಿಧಾನಗಳನ್ನು (SOP) ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಚಿವರು ಆದೇಶ ನೀಡಿದ್ದಾರೆ. ವನ್ಯಜೀವಿಗಳ ಸಮೀಪದಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿ ಹೆಚ್ಚಿನ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂಬ ಸೂಚನೆ ಕೂಡ ನೀಡಲಾಗಿದೆ.


ಮೃತ ವೈದ್ಯೆಯ ಕುಟುಂಬಕ್ಕೆ ಸರ್ಕಾರದ ನಿಯಮಾನುಸಾರ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
“ಇದು ಅತ್ಯಂತ ವಿಷಾದನೀಯ ಘಟನೆ. ಸರ್ಕಾರ ಮೃತರ ಕುಟುಂಬದ ಜೊತೆ ನಿಂತಿದೆ,” ಎಂದು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

img 20260319 wa00154136875834015853852 SHIVAMOGGA :ಗರ್ಭಿಣಿ ನೀರಾನೆ ದಾಳಿ -ಯುವ ಪಶುವೈದ್ಯೆಯ ದುರಂತ ಅಂತ್ಯ
img 20260319 wa00038456286297523361093 SHIVAMOGGA :ಗರ್ಭಿಣಿ ನೀರಾನೆ ದಾಳಿ -ಯುವ ಪಶುವೈದ್ಯೆಯ ದುರಂತ ಅಂತ್ಯ

Leave a Reply

Your email address will not be published. Required fields are marked *