ಇಂದಿನಿಂದ SSLC ಪರೀಕ್ಷೆ: ತಾಲೂಕಿನ 7 ಕೇಂದ್ರಗಳಲ್ಲಿ ಸಕಲ ಸಿದ್ಧತೆ

Blue and Red Voter Education Banner 20260317 220055 0000 scaled ಇಂದಿನಿಂದ SSLC ಪರೀಕ್ಷೆ: ತಾಲೂಕಿನ 7 ಕೇಂದ್ರಗಳಲ್ಲಿ ಸಕಲ ಸಿದ್ಧತೆ
Spread the love

ಹೊಸನಗರ: ತಾಲೂಕಿನ ನಾಲ್ಕು ಹೋಬಳಿಗಳಲ್ಲಿ  ಒಟ್ಟು ಏಳು ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆ ಸಮಗ್ರ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

fb img 17738054976601062059398927640660 ಇಂದಿನಿಂದ SSLC ಪರೀಕ್ಷೆ: ತಾಲೂಕಿನ 7 ಕೇಂದ್ರಗಳಲ್ಲಿ ಸಕಲ ಸಿದ್ಧತೆ

ಈ ಬಾರಿ 1,566 ಹೊಸ ವಿದ್ಯಾರ್ಥಿಗಳು ಹಾಗೂ 41 ಪುನರಾವರ್ತಿತ ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 1,607 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಮಹತ್ವದ ಪರೀಕ್ಷೆಯಾಗಿರುವುದರಿಂದ ಯಾವುದೇ ಅಡಚಣೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ.

ಬಿಗಿ ಭದ್ರತೆ : ಪರೀಕ್ಷೆಗಳು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಯುವಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ತಾಲೂಕು ಮಟ್ಟದ ಕ್ಷೇತ್ರ ಸಂಪನ್ಮೂಲ ಕೇಂದ್ರದಿಂದ ಪ್ರತಿಯೊಂದು ಪರೀಕ್ಷಾ ಕೇಂದ್ರದ ವೆಬ್‌ಕಾಸ್ಟಿಂಗ್ ವ್ಯವಸ್ಥೆಯೂ ಜಾರಿಯಲ್ಲಿದ್ದು, ನಿರಂತರ ನಿಗಾವಹಿಸಲಾಗುತ್ತಿದೆ.

ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗಬೇಕು.
- ಗಣೇಶ್ ಎ. ವೈ ,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹೊಸನಗರ
fb img 17738051899407191856627594186163 ಇಂದಿನಿಂದ SSLC ಪರೀಕ್ಷೆ: ತಾಲೂಕಿನ 7 ಕೇಂದ್ರಗಳಲ್ಲಿ ಸಕಲ ಸಿದ್ಧತೆ

ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಕಾಪಾಡಲು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಸಹಕಾರ ನೀಡುತ್ತಿದೆ.

ಪರೀಕ್ಷಾ ಸಮಯದಲ್ಲಿ ನಿಯಮ ಉಲ್ಲಂಘನೆ ಆಗದಂತೆ ಜಾಗೃತಿ ಮೂಡಿಸಲಾಗಿದ್ದು, ವಿದ್ಯಾರ್ಥಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುಸಜ್ಜಿತ ವ್ಯವಸ್ಥೆ ಇರುವುದರಿಂದ ಪರೀಕ್ಷೆಗಳು ಸುಗಮವಾಗಿ ನಡೆಯಲಿವೆ ಎಂಬ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಲು ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *