ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜು ರೆಡ್ಡಿ ನೇತೃತ್ವದ ತಂಡ ದಿಂದ ಯಶಸ್ವಿಕಾರ್ಯಾಚರಣೆ.
ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ 24 ಗಂಟೆಯೊಳಗೆ ಪತ್ತೆಹಚ್ಚುವಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಸೂಡೂರು ಗೇಟ್ ಬಳಿ ಬೈಕ್‌ಗೆ ಹಿಂಬದಿಯಿಂದ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಣಗೆರೆ ಕಟ್ಟೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಪೊಲೀಸರು ತ್ವರಿತ ತನಿಖೆ ನಡೆಸಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಿದ್ದಾರೆ.
ತನಿಖೆಯಲ್ಲಿ, ಕಲ್ಲುಪುಡಿ ಸಾಗಿಸುತ್ತಿದ್ದ ಹತ್ತು ಚಕ್ರದ ಲಾರಿ (ನೋಂದಣಿ ಸಂಖ್ಯೆ: KA 16 C 0275) ಸುಬ್ರಹ್ಮಣ್ಯ ಅವರು ಚಲಾಯಿಸುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ 24 ಗಂಟೆಯೊಳಗೆ ಲಾರಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ಯಶಸ್ವಿಯಾಗಿದೆ.















Leave a Reply