ಈ ಮೂರು ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್ಸಿ ಸ್ಥಾನಮಾನರದ್ದು ಸುಪ್ರೀಂಕೋರ್ಟ್
ಇಂದ್ರಪ್ರಸ್ಥ ( ನವದೆಹಲಿ ): ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದರ ( conversion )ಜೊತೆಗೆ ತನ್ನ ಹಿಂದಿನ ಧರ್ಮದಲ್ಲಿ ಸಿಗುತ್ತಿದ್ದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದರ ಬಗ್ಗೆ ಸುಪ್ರೀಂ ಕೋರ್ಟ್ Supreme Court ಒಂದು ಐತಿಹಾಸಿಕ ತೀರ್ಪು ನೀಡಿದೆ.
ಕ್ರಿಶ್ಚನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಗಳನ್ನು ಬಹಿರಂಗವಾಗಿ ಪ್ರತಿಪಾದಿಸುವ ಅಥವಾ ಆಚರಿಸುವ ವ್ಯಕ್ತಿಯು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯನಾಗಿ ಉಳಿಯುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ಪೀಠವು ಈ ತೀರ್ಪು ನೀಡಿದೆ. ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಕ್ರಿಶ್ಚಿಯನ್ ಧರ್ಮದಿಂದ ತಮ್ಮ ಮೂಲ ಧರ್ಮಕ್ಕೆ ಮರು ಮತಾಂತರಗೊಂಡಿಲ್ಲ ಅಥವಾ ಮಡಿಕಾ ಸಮುದಾಯಕ್ಕೆ ಮರಳಿ ಸ್ವೀಕರಿಸಲ್ಪಟ್ಟಿಲ್ಲ ಎಂದು ಪೀಠ ಹೇಳಿದೆ.

ಮೇಲ್ಮನವಿದಾರರು ಕ್ರಿಶ್ಚಿಯನ್ ಮತವನ್ನು ಅನುಸರಿಸುವುದನ್ನು ಮುಂದುವರೆಸಿದರು ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿ ಕಾರ್ಯನಿರ್ವಹಿಸಿದ್ದರು, ಹಳ್ಳಿಯ ಮನೆಗಳಲ್ಲಿ ನಿಯಮಿತವಾಗಿ ಭಾನುವಾರ ಪ್ರಾರ್ಥನೆಗಳನ್ನು ನಡೆಸುತ್ತಿದ್ದರು ಎಂದು ಪೀಠ ಗಮನಿಸಿತ್ತು.
ಎರಡೂ ಕಡೆಯ ವಾದ ಪ್ರತಿವಾದಗಳನ್ನು ಗಮನಿಸಿ ಆಲಿಸಿದಂತಹ ನ್ಯಾಯಾಲಯವು ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವುದರಿಂದ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದುಗೊಳ್ಳುತ್ತದೆ ಎಂದು ಮಹತ್ವದ ತೀರ್ಪು ನೀಡಿದೆ.

ಆಪಾದಿತ ಘಟನೆ ನಡೆದ ಸಮಯದಲ್ಲಿ ಅವರು ಮನೆಯಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದರು ಎಂದು ಪೀಠ ಒಪ್ಪಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಘಟನೆ ನಡೆದ ದಿನಾಂಕದಂದು ಅವರು ಕ್ರಿಶ್ಚಿಯನ್ ಆಗಿಯೇ ಉಳಿದಿದ್ದರೂ ಎಂದು ಪೀಠ ಹೇಳಿದೆ ಹಿಂದೂ ಧರ್ಮ ಅಥವಾ ಬೌದ್ಧ ಧರ್ಮ, ಸಿಖ್ ಧರ್ಮ ವನ್ನು ಹೊರತುಪಡಿಸಿ ಬೇರೆ ಧರ್ಮಗಳನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಬೇರೆ ಯಾವುದೇ ಧರ್ಮಕ್ಕೆ ಮತಾಂತರ ಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.
















Leave a Reply