ರಿಪ್ಪನ್ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದ ದುರ್ಗಾಪರಮೇಶ್ವರಿ ವೃತ್ತದಲ್ಲಿ ಹೈಮಾಸ್ಕ್ ಬೀದಿ ದೀಪ ಅಳವಡಿಸಲು ಅಗತ್ಯ ಅನುದಾನ ಮಂಜೂರು ಮಾಡುವಂತೆ ಗ್ರಾಮಸ್ಥರು ಸಂಸದ ಬಿ.ವೈ . ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ತಳಲೆ ಗ್ರಾಮದ ದುರ್ಗಾಪರಮೇಶ್ವರಿ ವೃತ್ತದಲ್ಲಿ ಬೆಳ್ಳೂರು, ಹಾರಂಬಳ್ಳಿ ಹಾಗೂ ಮುಗುಡ್ತಿ ರಸ್ತೆಗಳು ಒಂದೇ ಸ್ಥಳದಲ್ಲಿ ಸೇರುವುದರಿಂದ ದಿನನಿತ್ಯ ನೂರಾರು ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ರಾತ್ರಿ ವೇಳೆಯಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಅಪಘಾತಗಳ ಸಂಭವವೂ ಹೆಚ್ಚಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವೃತ್ತದಲ್ಲಿ ಹೈಮಾಸ್ಕ್ ಬೀದಿ ದೀಪ ಅಳವಡಿಸಿದರೆ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ. ಆದ್ದರಿಂದ ಹೆದ್ದಾರಿಪುರ ಗ್ರಾಮ ಪಂಚಾಯಿತಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕಗ್ಗಲಿ ಲಿಂಗಪ್ಪ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಸಂಸದರಿಗೆ ಮನವಿ ಸಲ್ಲಿಸಿದರು.
















Leave a Reply